ಬೆಂಗಳೂರು: ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ ದೇವನಹಳ್ಳಿ ಸಮೀಪ ಭೂಮಿ ವಶಪಡಿಸಿಕೊಳ್ಳಲು ಕೈಗೊಂಡ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದ ಬೆನ್ನಲ್ಲೇ, ತಮ್ಮ ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಉದ್ಯಮಿಗಳಿಗೆ ನೆರೆಯ ಆಂಧ್ರ ಸರ್ಕಾರ ಆಹ್ವಾನ ನೀಡಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ರಾಜ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್, ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ರಾಜ್ಯದಿಂದ ಅಲ್ಲಿಗೆ ಹೋಗುವುದಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು ಎಂದರು.
ರಾಜ್ಯ ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. ಜಾಗತಿಕ ಮಟ್ಟದಲ್ಲಿ ನಮ್ಮದು ಮೂರನೇ ಅತ್ಯುತ್ತಮ ಕಾರ್ಯ ಪರಿಸರವಾಗಿದೆ. ಉದ್ಯಮಿಗಳಿಗೆ ಭೂಮಿ ಕೊಟ್ಟಮಾತ್ರಕ್ಕೆ ಅವರು ಅಲ್ಲಿಗೆ ಹೋಗುವುದಿಲ್ಲ. ಪರಿಸರ ಕೂಡ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಆಂಧ್ರದ ಸಚಿವ ನಾರಾ ಲೋಕೇಶ್ ಅವರ ಟ್ವೀಟ್ ಅನ್ನು ನಾನೂ ನೋಡಿದ್ದೇನೆ. ನಾನೂ ಅಲ್ಲೇ ಉತ್ತರ ಕೊಟ್ಟಿದ್ದೇನೆ. ಎಂ ಬಿ ಪಾಟೀಲನಿಗೂ ಸಾಮರ್ಥ್ಯವಿದೆ. ಕರ್ನಾಟಕ ರಾಜ್ಯವೂ ಸಮರ್ಥವಾಗಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಏರೋಸ್ಪೇಸ್ ಮಾತ್ರವಲ್ಲ, ಎಐ, ಡೀಪ್-ಟೆಕ್, ಐಟಿ ಹೀಗೆ ಎಲ್ಲಾ ತರಹದ ಉದ್ಯಮಗಳಿಗೂ ಭೂಮಿ ಇದೆ. ಒಬ್ಬೇ ಒಬ್ಬ ಉದ್ಯಮಿಯೂ ಕರ್ನಾಟಕದಿಂದ ಹೊರಹೋಗಲು ನಾನು ಬಿಡುವುದಿಲ್ಲ ಎಂದರು.
ಏರೋಸ್ಪೇಸ್ ಉದ್ಯಮಿಗಳಿಗೆ ಬರೀ ಭೂಮಿಯಲ್ಲ, ಅದರ ಜತೆಗೆ ನೀರು, ವಿದ್ಯುತ್ ಎಲ್ಲವನ್ನೂ ಕೊಡುತ್ತೇವೆ. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳಿಗೆ ನಮ್ಮ ಪಾಲಿನ ನೀರು ಬಳಸಿಕೊಳ್ಳಲು 3,600 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಯೋಜನೆಯನ್ನೇ ರೂಪಿಸಲಾಗಿದೆ ಎಂದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈಗ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ಸರಕಾರವೇನಾದರೂ ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದರೆ, ಆಗ ಅವರು ರೈತರ ಪರವಾಗಿ ಮಾತನಾಡುತ್ತಿದ್ದರು. ವಿರೋಧ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ, ನನಗೆ ರಾಜ್ಯದ ಹಿತಾಸಕ್ತಿ ಮಾತ್ರ ಮುಖ್ಯ ಎಂದರು.



