ಬೆಂಗಳೂರು: ಲೋಕಸಭೆಯಲ್ಲಿ ಕರ್ನಾಟಕದ ಕೃಷ್ಣಾ, ಕಾವೇರಿ ನೀರಾವರಿ ಯೋಜನೆಗಳು ಮತ್ತು ಅಂತರರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ನೀರಾವರಿ ಯೋಜನೆಗಳು ಮಾತ್ರವಲ್ಲ; ಸಂಸತ್ತಿನಲ್ಲಿ ಪ್ರಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ ಎಂದರು.
ನಾನು ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. ನಮ್ಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ್ಮ ಅಧಿಕಾರಿಗಳನ್ನು ಇಟ್ಟು ಸುಮಾರು 3,800 ಕೊಟಿ ರೂ. ತಂದಿದ್ದೆ. ಕೇಂದ್ರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ 5,000 ಕೋಟಿ ರೂ ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಮಾತನಾಡಿ ಹಣ ತರಲು ಪ್ರಯತ್ನಿಸುತ್ತೇನೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ನಾವು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೆವು. ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಆದರೆ, ನಮ್ಮ ಒತ್ತಾಸೆಯ ಕಾರಣಕ್ಕೆ ಈ ಯೋಜನೆಗೆ ವಿಶೇಷವಾಗಿ 5,000 ಕೋಟಿ ರೂ. ನೀಡುವ ಭರವಸೆ ನೀಡಿದ್ದರು ಎಂದರು.




