ಬೆಂಗಳೂರು: ಅಹಿಂದ ನಾಯಕರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳುವ ಮೂಲಕ ನಾಯಕತ್ವ ಬದಲಾವಣೆ ವಿಚಾರಕ್ಕೆ ಹೊಸ ಬಣ್ಣ ಕೊಡಲು ಯತ್ನಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟ ಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ. ಇವರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಖರ್ಗೆ ಅವರನ್ನು ಎಂದರು.
ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ. ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ ಎಂದರು.
ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ ಎಂದರು.
ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ, ಯಾವುದಾದರೂ ಹುದ್ದೆ ಬಯಸಿದರೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದರು.
ಈ ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಲಿ ಎಂದರು.




