10 ದಿನಗಳ ಕಾಲ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ

5 months ago

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 8 ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ. 10 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಹಲವು ಮಸೂದೆಗಳ ಮಂಡನೆ ಸೇರಿದಂತೆ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.

ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ಸಾರ್ವಜನಿಕ ಸ್ಥಳಗಳಲ್ಲಿ ಸಭೆ‌ ಸಮಾರಂಭಗಳನ್ನು ಆಯೋಜಿಸಲು ನಿಯಂತ್ರಣ ಸೇರಿದಂತೆ ಹಲವು ಮಸೂದೆಗಳನ್ನು ಅನುಮೋದನೆಗಾಗಿ ಮಂಡಿಸಲಾಗುವುದು ಎಂದರು.

ಸಂಪುಟದ ಇತರೆ ನಿರ್ಧಾರಗಳು: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ 150 ಟನ್‌ಗಳಷ್ಟು ಹಸಿ ತ್ಯಾಜ್ಯವನ್ನು Compressed Bio Gas (CBG) ಘಟಕದ ಮೂಲಕ ಸಂಸ್ಕರಿಸಲು Gas Authority of India Limited (GAIL) ತುರುಮುರಿ ತ್ಯಾಜ್ಯ ನಿರ್ವಹಣೆ ಪ್ರದೇಶದಲ್ಲಿ 10 ಎಕರೆ ಜಾಗವನ್ನು 25 ವರ್ಷಗಳ ಅವಧಿಗೆ Nominal Lease Rate ಆಧಾರದ ಮೇಲೆ ವಹಿಸಿಕೊಡಲು ಅನುಮೋದನೆ ನೀಡಲಾಗಿದೆ.

ಗ್ರೇಟರ್ ಬೆಂಗಳೂರು ಗವರ್ನೆನ್ಸ್ (ಎರಡನೇ ತಿದ್ದುಪಡಿ) ವಿಧೇಯಕ 2025ಕ್ಕೆ ಸಂಪುಟ ಸಭೆ ಅನುಮೋದಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ 46 ಯಾಂತ್ರಿಕ ಕಸಗುಡಿಸುವ ಯಂತ್ರಗಳನ್ನು (Mechanical Sweeping Machines) ಏಳು ವರ್ಷಗಳ ಅವಧಿಗೆ ಬಾಡಿಗೆ ಆಧಾರದ ಮೇಲೆ ಒಟ್ಟು ರೂ.613.25 ಕೋಟಿಗಳ ಅಂದಾಜು ಮೊತ್ತದಲ್ಲಿ ಪಡೆಯಲು ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಾನಿಟರಿಂಗ್, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ 12003 ಮೀನುಗಾರಿಕಾ ದೋಣಿಗಳಿಗೆ ರೂ.43.69 ಕೋಟಿಗಳ ವೆಚ್ಚದಲ್ಲಿ (ಕೇಂದ್ರ: ರೂ.26.21 ಕೋಟಿಗಳು, ರಾಜ್ಯ: ರೂ.17.48 ಕೋಟಿಗಳು) ದ್ವಿಮುಖ ಸಂಪರ್ಕ ಸಾಧನಗಳನ್ನು ಅಳವಡಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ಕೋರ್ಟ್ ಮ್ಯಾನೇಜರ್‌ಗಳ ವಿಲೀನಾತಿ) (ವಿಶೇಷ) ನಿಯಮಗಳು, 2025″ ಮತ್ತು “ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) ಕೋರ್ಟ್ ಮ್ಯಾನೇಜ‌ರ್ ಗಳ ನೇಮಕಾತಿ ಮತ್ತು ಸೇವಾ ಷರತ್ತುಗಳು (ವಿಶೇಷ) ನಿಯಮಗಳು, 2025ಗಳಿಗೆ ಅನುಮೋದಿಸಲಾಯಿತು.

ಮೈಸೂರು ನಗರದಲ್ಲಿರುವ ಸರ್ಕಾರಿ ಅತಿಥಿ ಗೃಹದ ನೌಕರರ ವಸತಿ ಗೃಹಗಳ ಆವರಣದಲ್ಲಿ ಶಾಸಕರ ಹಾಗೂ ಸಂಸದರ ಭವನವನ್ನು ಅಂದಾಜು 15 ಕೋಟಿಗಳ ಮೊತ್ತದಲ್ಲಿ ನಿರ್ಮಿಸಲು ಅನುಮೋದನೆ.

ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030ಕ್ಕೆ ಅನುಮೋದನೆ.

ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025-2030ಕ್ಕೆ ಅನುಮೋದನೆ.

ಎಐ, ಹಸಿರು ಐಟಿ ಹಾಗೂ ಉದಯೋನ್ಮುಖ ತಂತ್ರಜ್ಞಾನಕ್ಕೆ ಆದ್ಯತೆ ನೀಡುವ ಗುರಿ. ಸ್ಥಳೀಯ ಆರ್ಥಿಕ ವೇಗವರ್ಧನೆ ಕಾರ್ಯಕ್ರಮ (LEAP) ಅಡಿಯಲ್ಲಿ ರಕ್ಷಣಾ ತಂತ್ರಜ್ಞಾನ ಮತ್ತು ಕೈಗಾರಿಕೆ 5.0 ಗಾಗಿ ಧಾರ್ತಿ: ಪ್ರತಿಷ್ಠಾನ, IIT ಧಾರವಾಡ ಇವರಿಂದ ಶ್ರೇಷ್ಠತಾ ಕೇಂದ್ರ (CoE) ಗಳನ್ನು18 ಕೋಟಿಗಳ ಅಂದಾಜು ಮೊತ್ತದಲ್ಲಿ 5 ವರ್ಷಗಳ ಅವಧಿಯಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸ್ಥಳೀಯ ಆರ್ಥಿಕ ವೇಗವರ್ಧನೆ ಕಾರ್ಯಕ್ರಮ (LEAP) ಅಡಿಯಲ್ಲಿ IT ಧಾರವಾಡದಲ್ಲಿರುವ ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟಿಂಗ್ ಕೇಂದ್ರದಲ್ಲಿ ಉತ್ಕೃಷ್ಟತಾ ಕೇಂದ್ರ (CoE)ನ್ನು 18 ಕೋಟಿಗಳ ಅಂದಾಜು ಮೊತ್ತದಲ್ಲಿ 5 ವರ್ಷಗಳ ಅವಧಿಯಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.

ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಕೂರು ತಾಲ್ಲೂಕು, ಸೊಲೇನಹಳ್ಳಿ ಗ್ರಾಮದ ಸ.ನಂ. 22ರಲ್ಲಿ 0.06 ಗುಂಟೆ ಜಮೀನನ್ನು ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಗೆ ಮಂಜೂರು ಮಾಡಲಾಗಿದೆ.

Leave a Reply