ಬೆಂಗಳೂರು: ನೆರೆಯ ಕೇರಳ ರಾಜ್ಯದೊಂದಿಗೆ ಕರ್ನಾಟಕ ಮತ್ತೊಂದು ಸಮರ ಆರಂಭಿಸಿದೆ. ಕೇರಳ ಸರ್ಕಾರ ಅಂಗೀಕರಿಸಿರುವ ಮಲಯಾಳಂ ಭಾಷಾ ಮಸೂದೆ- 2025 ಕೇರಳದ ಗಡಿ ಜಿಲ್ಲೆಗಳ ಕನ್ನಡ ಭಾಷಿಗರು ಮತ್ತು ಕನ್ನಡ ಶಾಲೆಗಳಿಗೆ ಗಂಡಾಂತರಕಾರಿಯಾಗಿದ್ದು ಅದನ್ನು ಕೂಡಲೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿರುವ ಈ ಮಸೂದೆಗೆ ಅನುಮೋದನೆ ನೀಡದಂತೆ ಈಗಾಗಲೇ ಕರ್ನಾಟಕ ಗಡಿ ಪ್ರಾಧಿಕಾರದ ಪ್ರತಿನಿಧಿಗಳು ಕೇರಳ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ತಾವು ಕೂಡ ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿಯೋಗದಲ್ಲಿ ಕೇರಳ ರಾಜ್ಯಪಾಲರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೇರಳದ ಗಡಿ ಜಿಲ್ಲೆಗಳಲ್ಲಿ ಕನ್ನಡಿಗರು ಮತ್ತು ಮಲಯಾಳಂ ಭಾಷಿಗರು ಅತ್ಯಂತ ಸೌಹಾರ್ದತೆಯಿಂದ ವಾಸಿಸುತ್ತಿದ್ದಾರೆ ಇಂತಹ ಸಮಯದಲ್ಲಿ ಕೇರಳ ಸರ್ಕಾರ ಕೇವಲ ರಾಜಕೀಯ ಕಾರಣಕ್ಕಾಗಿ ಈ ರೀತಿಯ ಕಾನೂನು ಜಾರಿಗೊಳಿಸುವ ಮೂಲಕ ಬಾಂಧವ್ಯ ಹಾಳು ಮಾಡಲು ಪ್ರಯತ್ನಿಸಿದೆ ಎಂದು ಆಪಾದಿಸಿದ್ದಾರೆ.
ಇತ್ತೀಚೆಗೆ ತಾವು ಕೇರಳದ ಗಡಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೆ ಅಲ್ಲಿನ ಕನ್ನಡಿಗರು ಬದುಕುತ್ತಿರುವ ರೀತಿಯನ್ನು ಗಮನಿಸಿದಾಗ ನನಗೆ ಕೇರಳಕ್ಕೆ ಬಂದಿದ್ದೇನೆ ಎಂದು ಅನ್ನಿಸಲೇ ಇಲ್ಲ ಅಲ್ಲಿ ಸಂಪೂರ್ಣ ಕನ್ನಡ ಮಯವಾದ ವಾತಾವರಣವಿದೆ ಹೀಗಿದ್ದರೂ ಕೂಡ ಕೇರಳ ಸರ್ಕಾರ ಇಂತಹ ಮಸೂದೆ ಜಾರಿಗೊಳಿಸುವ ಮೂಲಕ ಸಂಬಂಧ ಹಾಳು ಮಾಡಲು ಪ್ರಯತ್ನಿಸಿದೆ ಎಂದು ದೂರಿದಿದ್ದಾರೆ.
ಕೇರಳದಲ್ಲಿ ಸುಮಾರು 202 ಕನ್ನಡ ಮಾಧ್ಯಮ ಶಾಲೆಗಳಿವೆ. ನಾನೇ ಖುದ್ದಾಗಿ ಕಳೆದ ಒಂದೂವರೆ ವರ್ಷದ ಹಿಂದೆ ಎಡನೀರು ಮಠಕ್ಕೆ ಭೇಟಿ ನೀಡಿ, ಮಠ ನಿರ್ವಹಣೆ ಮಾಡುತ್ತಿರುವ ಕನ್ನಡ ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಕಾಸರಗೋಡಿನ ಜನರ ಮನಸ್ಸು ಹಾಗೂ ಜೀವನ ಸಂಪೂರ್ಣ ಕನ್ನಡ ಭಾಷಾಮಯವಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ – 2025ನ್ನು ಕೂಡಲೇ ಹಿಂಪಡೆಯಬೇಕು. ಎಂದು ಆಗ್ರಹಿಸಿರುವ ಅವರು ಯಾವುದೇ ಸಂದರ್ಭದಲ್ಲಿ ನಮ್ಮ ಸರ್ಕಾರ ಕನ್ನಡದ ಮನಸ್ಸು ಹಾಗೂ ಭಾವನೆಗಳಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದಿದ್ದಾರೆ.
ಈಗಾಗಲೇ ಕೇರಳ ಸರ್ಕಾರ ಮಸೂದೆಯನ್ನು ಅಂಗೀಕರಿಸುವ ಮೂಲಕ ಮಕ್ಕಳ ಹಕ್ಕಿನ ಉಲ್ಲಂಘನೆ ಮಾಡಿದ್ದು, ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ ಕೂಡ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.




