ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿವೆ. ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ ಹಲವು ವನ್ಯಜೀವಿಗಳ ತಾಣವಾಗಿದೆ ಎಂದಿದ್ದಾರೆ.
ಇಂಡಿಯನ್ ಗ್ರೇ ಉಲ್ಫ್ ಎಂಬ ಪ್ರಭೇದದ ತೋಳಗಳು ಈ ಸಂರಕ್ಷಿತ ಪ್ರದೇಶದಲ್ಲಿದ್ದು, ಇತ್ತೀಚೆಗೆ 8 ಮರಿಗಳಿಗೆ ಒಂದು ತೋಳ ಜನ್ಮ ನೀಡಿದೆ. ಇವುಗಳ ಪೈಕಿ ಸಾಮಾನ್ಯವಾಗಿ ಪ್ರತಿಶತ 50ರಷ್ಟು ಬದುಕುಳಿಯುವ ಸಾಧ್ಯತೆ ಇರುತ್ತದೆ. ಆದರೆ ಎಲ್ಲ ತೋಳದ ಮರಿಗಳನ್ನೂ ಉಳಿಸಲು ಅರಣ್ಯಾಧಿಕಾರಿಗಳು ಕ್ರಮವಹಿಸಿದ್ದಾರೆ ಎಂದಿದ್ದಾರೆ.
ಈ ಪ್ರದೇಶವನ್ನು ತೋಳವನ್ಯಧಾಮ ಎಂದು 15ನೇ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಘೋಷಿಸಲಾಗಿದ್ದು, ಜ.18ರಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೂ ನಿರ್ಣಯಿಸಲಾಗಿದೆ ಎಂದಿದ್ದಾರೆ.
ಬಂಕಾಪೂರ ತೋಳ ವನ್ಯಧಾಮದಲ್ಲಿ ಈ 8 ಮರಿಗಳೂ ಸೇರಿ ಸುಮಾರು 35-40 ತೋಳಗಳಿವೆ. ಇವುಗಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದಿದ್ದಾರೆ.
ಗಂಗಾವತಿ ನಗರದಿಂದ 15 ಕಿ.ಮೀ ದೂರದಲ್ಲಿರುವ ಈ ವನ್ಯಜೀವಿ ಧಾಮದಲ್ಲಿ ಸಫಾರಿ ವ್ಯವಸ್ಥೆ ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.




