ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿದ್ದರೆ, ಜೈಲಿನ ಮುಂಭಾಗದಲ್ಲಿ ಮಹಿಳೆಯೊಬ್ಬರು ರಂಪಾಟ ಮಾಡಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಬೆಂಗಳೂರಿನಿಂದ ಬಳ್ಳಾರಿಗೆ ಬಂದಿರುವ ಲಕ್ಷ್ಮಿ ಎಂಬ ಮಹಿಳೆ ದರ್ಶನ್ ಏನು ತಪ್ಪು ಮಾಡಿದ್ದಾರೆ ಎಂದು ಜೈಲಿನಲ್ಲಿಟ್ಟಿದ್ದಾರೆ? ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್ ಸೇದಿದರು ಎಂಬ ಕಾರಣಕ್ಕಾಗಿ ಬಳ್ಳಾರಿಗೆ ತಂದು ಹಾಕಿದ್ದಾರೆ. ಯಾರೂ ಬೀಡಿ, ಸಿಗರೇಟು ಸೇದುವುದೇ ಇಲ್ಲವೇ? ಅದೇನು ಮಹಾಪರಾಧವೇ? ಎಂದು ಪ್ರಶ್ನಿಸಿದರು.
ನಟ ದರ್ಶನ್ ಅವರನ್ನು ನೋಡಲೇಬೇಕು. ನಾನು ಅವರನ್ನು ಮದುವೆ ಆಗುತ್ತೇನೆ. ಅವರನ್ನು ನೋಡಲು ಬಿಡಿ ಎಂದು ಜೈಲು ಅಧಿಕಾರಿಗಳ ಮುಂದೆ ಅಲವತ್ತುಕೊಂಡಿದ್ದಾರೆ.
ದರ್ಶನ್ ಮೇಲೆ ನನಗೆ ಅತಿಯಾದ ಅಭಿಮಾನ. ಅವರು ಇಷ್ಟಪಟ್ಟರೆ ನಾನು ಮದುವೆಯಾಗಲೂ ಸಿದ್ಧ. ವಿಜಯಲಕ್ಷ್ಮಿ ಒಬ್ಬರೇ ಹೆಂಡತಿಯಲ್ಲ, ನಾನೂ ಕೂಡ ದರ್ಶನ್ ಪತ್ನಿ ಇದ್ದಂತೆ ಎಂದು ಹೇಳಿ ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ.
ನಾನು ಗುಲ್ಬರ್ಗದ ಮೂಲದವಳು. ಬೆಂಗಳೂರಿನ ಆರ್.ಆರ್.ನಗರದಲ್ಲಿದ್ದೆ. ದರ್ಶನ್ ಜೈಲಿಗೆ ಹೋದ ದಿನದಿಂದ ಅವರ ಭೇಟಿಗಾಗಿ ಸತತ ಪ್ರಯತ್ನ ಮಾಡುತ್ತಿದ್ದೇನೆ. ಪೊಲೀಸರು ಒಳಗೆ ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ದರ್ಶನ್ ನೋಡದ ಹೊರತು ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಹಠಮಾಡಿದರು.
ದರ್ಶನ್ರನ್ನು ನೋಡಬೇಕೆಂಬ ಆಸೆ ತುಂಬಾ ಜನಕ್ಕೆ ಇರುತ್ತದೆ. ಬರುವವರಿಗೆ ಅವಕಾಶ ಮಾಡಿಕೊಡಬೇಕು. ಈ ಹಿಂದೆ ನಾನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದೆ. ಅಲ್ಲಿಯೂ ಭೇಟಿಯಾಗಲಿಕ್ಕಾಗಲಿಲ್ಲ. ಹೀಗಾಗಿ ಬಳ್ಳಾರಿಗೆ ಬಂದಿದ್ದೇನೆ. ನಾನು ಅವರೊಂದಿಗೆ ಮಾತನಾಡದೇ ಇದ್ದರೂ ಪರವಾಗಿಲ್ಲ, ನೋಡಲು ಅವಕಾಶ ಕೊಡಿ. ನಾನು ಹಣ್ಣುಹಂಪಲುಗಳನ್ನು ಮಾತ್ರ ತಂದಿದ್ದೇನೆ. ದರ್ಶನ್ ಇಷ್ಟಪಟ್ಟರೆ ಚಿಕನ್, ಮಟನ್ ಕೂಡ ತಂದುಕೊಡುತ್ತೇನೆ ಎಂದಿದ್ದಾರೆ.




