ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದಾಖಲಾಗಿದ್ದ ಪ್ರಕರಣಗಳ ಹಿನ್ನೆಲೆ ಹಾಗೂ ಇತರ ವಿಚಾರಗಳ ಬಗ್ಗೆ ಸ್ಪಷ್ಟತೆ ಇಲ್ಲ. ತನಿಖೆ ಮಾಡಿದಾಗ ಎಲ್ಲಾ ವಾಸ್ತವಾಂಶಗಳು ಗೊತ್ತಾಗಲಿದೆ. ಅದಕ್ಕಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ತಾವು ಕೆಲ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಮಹಿಳೆಯ ಸ್ವಯಂ ವಿವಸ್ತ್ರಗೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ದೊರೆತಿರುವ ಮಾಹಿತಿ. ಆ ಸಂದರ್ಭದಲ್ಲಿ ಅಲ್ಲಿದ್ದ ಪೊಲೀಸರು, ಮಹಿಳೆ ಸಂಪೂರ್ಣವಾಗಿ ವಿವಸ್ತ್ರಗೊಳ್ಳಲು ಬಿಟ್ಟಿಲ್ಲ. ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಅದರ ನಂತರವೂ ಸಂಪೂರ್ಣ ವಿವರ ಕಲೆಹಾಕಲು ತನಿಖೆ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದರು.
ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತು ನಾನೇ ತೀರ್ಮಾನ ತೆಗೆದುಕೊಳ್ಳಬಹುದು. ಆದರೆ ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳಿಗೆ ರಾಜ್ಯದ ಜವಾಬ್ದಾರಿ ಇದೆ. ಅವರ ಗಮನಕ್ಕೆ ತಂದು ತೀರ್ಮಾನ ಪ್ರಕಟಿಸಬೇಕಾಗುತ್ತದೆ ಎಂದರು.




