ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರ್ಣಗೊಳಿಸಿದೆ. ಕಳೆದ ಒಂದು ವರ್ಷದಲ್ಲಿಈ ಯೋಜನೆಯಡಿಯಲ್ಲಿ ರಾಜ್ಯದ 227 ಕೋಟಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದ ಶಕ್ತಿ ಯೋಜನೆಯ ಸಾಧಕಬಾಧಕಗಳ ಅಂಕಿಅಂಶಗಳನ್ನು ವಿವರಿಸಿ, ಶಕ್ತಿ ಯೋಜನೆ ಜಾರಿಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 5,526.64 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದರು.
ಶಕ್ತಿ ಯೋಜನೆ ಜಾರಿಗೊಂಡ ಒಂದು ವರ್ಷದ ಅವಧಿಯಲ್ಲಿ 226.95 ಕೋಟಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಜೊತೆಗೆ ಅವರ ಕುಟುಂಬ ಸದಸ್ಯರು ಕೂಡ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದು ಸಾರಿಗೆ ಇಲಾಖೆಗೆ ಹೆಚ್ಚಿನ ಆದಾಯ ಬಂದಿದೆ ಎಂದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ (ಬಿಎಂಟಿಸಿ – 71.45 ಕೋಟಿ) ಮಹಿಳೆಯರು ಹೆಚ್ಚಿನ ಪ್ರಯಾಣ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ – 69.5 ಕೋಟಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಡಬ್ಲ್ಯುಕೆಆರ್ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ಕ್ರಮವಾಗಿ 52.12 ಕೋಟಿ ಮತ್ತು 33.47 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದರು.
ಯೋಜನೆ ಯಶಸ್ಸಿನ ಹಿನ್ನೆಲೆಯಲ್ಲಿ 5,800 ಹೊಸ ಬಸ್ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಾದ್ಯಂತ 2,438 ಹೊಸ ಬಸ್ಗಳನ್ನು ಸೇರ್ಪಡೆಗೊಳಿಸಲಾಗಿದೆ. ರಾಜ್ಯ ‘ಪಲ್ಲಕ್ಕಿ’, ‘ಅಶ್ವಮೇಧ ಕ್ಲಾಸಿಕ್’, ‘ಕಲ್ಯಾಣ ರಥ’ ಮತ್ತು ‘ಅಮೋಘ ವರ್ಷ’ ಬ್ರಾಂಡ್ನೊಂದಿಗೆ ಹೊಸ ಬಸ್ಗಳನ್ನು ಪರಿಚಯಿಸಿದೆ ಎಂದರು
ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9,000 ಹುದ್ದೆಗಳ ನೇಮಕಕ್ಕೆ ಅನುಮೋದನೆ ನೀಡಲಾಗಿದೆ. ಈ ನಿಟ್ಟಿನಲ್ಲಿ 1,844 ಚಾಲಕ-ಕಮ್-ಕಂಡಕ್ಟರ್ ಮತ್ತು ತಾಂತ್ರಿಕ ಸಹಾಯಕರನ್ನು ನೇಮಕ ಮಾಡಲು ನೇಮಕ ಆದೇಶಗಳನ್ನು ನೀಡಲಾಗಿದೆ. 6,500 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ ಮತ್ತು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದರು.




