ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ: ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಔದ್ಯೋಗಿಕವಾಗಿ ಅವಕಾಶಗಳನ್ನು ಸೃಷ್ಟಿಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಮಹಿಳೆಯರನ್ನು ಪೂಜನೀಯ ಸ್ಥಾನದಲ್ಲಿರಿಸಿದ್ದರೂ, ಅವರನ್ನು ಹತ್ತಿಕ್ಕುವುದು ಅನಾದಿ ಕಾಲದಿಂದಲೂ ನಡೆಯುತ್ತಿದೆ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪುರುಷ ಪ್ರಧಾನ ದೇಶದಲ್ಲಿ ಮಹಿಳೆಯರು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದರು.
ಶಿಕ್ಷಣ ವಂಚಿತ ಪೋಷಕರ ಮಕ್ಕಳ ಶಿಕ್ಷಣಕ್ಕಾಗಿ ಶೇ.10 ಮೀಸಲಾತಿ ಸರ್ಕಾರ ಕಲ್ಪಿಸಿದೆ. ಇದರ ಸದುಪಯೋಗವಾಗಬೇಕು. ಮಹಿಳೆಯರು ಪ್ರಶ್ನಿಸುವ ಮನೋಭಾವ ಬೆಳಸಿಕೊಂಡಲ್ಲಿ ವೈಚಾರಿಕವಾಗಿ ಮುಂದೆ ಬರುತ್ತಾರೆ ಎಂದರು.
ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್.ರುದ್ರೇಶ್ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಗೆ ಸೀಮಿತವಾಗದೇ ಸಮಾಜಮುಖಿಯಾಗಿ ಬೆಳೆಯಬೇಕು. ಸಾವಿತ್ರಿಬಾಯಿ ಫುಲೆ, ಕಿತ್ತೂರು ರಾಣಿ ಚನ್ನಮ್ಮ, ಒನಕೆ ಓಬವ್ವ, ಮದರ್ ಥೆರೇಸಾ, ಅಕ್ಕಮಹಾದೇವಿಯವರ ಚಿಂತನೆಗಳು ಇಂದಿನ ಮಹಿಳೆಯರಿಗೆ ಅದರ್ಶವಾಗಬೇಕು ಎಂದರು.
ಸಮಾಜದ ವಿಜ್ಞಾನ ನಿಕಾಯದ ಡೀನರಾದ ಗೌರಿ ಮಾಣಿಕ್ ಮಾನಸ ಮಾತನಾಡಿ, ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಸಮಾಜದಿಂದ ಆಗಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಗಾಗಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಮಹಿಳಾ ದಿನಾಚರಣೆಯ ಪ್ರಯುಕ್ತ ಇತ್ತೀಚೆಗೆ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಪದಕ, ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ನಂತರದಲ್ಲಿ ಜನಪದ ಸಂಗೀತ, ಹಾಸ್ಯ ಕಾರ್ಯಕ್ರಮ ಜರುಗಿದವು. ಡಾ.ಹೆಚ್.ತಿಪ್ಪೇಸ್ವಾಮಿ ನಿರೂಪಿಸಿದರು.
ಈ ಸಂದರ್ಭದಲ್ಲಿ ಮೌಲ್ಯಮಾಪನ ಕುಲಸಚಿವರಾದ ಡಾ.ಎನ್.ಎಂ. ಸಾಲಿ, ಡಾ.ಅಂಶುಮಾಲಿ, ಡಾ.ಗೋಪಾಲ್.ಎನ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.




