ಬೂತ್ ಮಟ್ಟದ ಕಾರ್ಯಕರ್ತರ ಸಭೆಗಳನ್ನು ನಡೆಸುವ ಮೂಲಕ ಬೂತ್ ಸಮಿತಿಗಳನ್ನು ಬಲಿಷ್ಠಗೊಳಿಸಿ ತಕ್ಷಣ ಚುನಾವಣಾ ಕೆಲಸಕಾರ್ಯಗಳಿಗೆ ಚುರುಕು ನೀಡಿ: ಅಬ್ದುಲ್ ಹನ್ನಾನ್
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಳಗಾವಿ: ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಬೆಳಗಾವಿ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಮೌಝಮ್ ಮುಲ್ಲಾನಿ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಸಮಿತಿ ಸದಸ್ಯ ಮಕ್ಸೂದ್ ಮಕಾಂದಾರ್ ಸಮ್ಮುಖದಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜರುಗಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಬ್ದುಲ್ ಹನ್ನಾನ್, ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಪಾಲ್ಗೊಂಡು ರಾಜಕೀಯವಾಗಿ ಪಕ್ಷವನ್ನು ಬಲಿಷ್ಠಗೊಳಿಸಿ ಪಕ್ಷಕ್ಕೆ ರಾಜಕೀಯ ಶಕ್ತಿಯನ್ನು ತುಂಬುವ ಕೆಲಸ ಮಾಡಬೇಕಾಗಿದೆ ಎಂದರು.
ಮುಂಬರಲಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎಂಬ ಬಗ್ಗೆ ಚರ್ಚೆ ಮತ್ತು ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಬೂತ್ ಮಟ್ಟದ ಕಾರ್ಯಕರ್ತರ ಸಭೆಗಳನ್ನು ನಡೆಸುವ ಮೂಲಕ ಬೂತ್ ಸಮಿತಿಗಳನ್ನು ಬಲಿಷ್ಠಗೊಳಿಸಿ ತಕ್ಷಣ ಚುನಾವಣಾ ಕೆಲಸಕಾರ್ಯಗಳಿಗೆ ಚುರುಕು ನೀಡುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಬಾಂಬೆ ಕರ್ನಾಟಕ ಭಾಗದ ಜಲ್ವಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬೂಬಕರ್ ಖಾದ್ರಿ ಜಿಲ್ಲಾ ಕಾರ್ಯದರ್ಶಿಗಳಾದ ಮಜೀದ್ ಶೇಖ್, ಜಾಕಿರ್ ನಾಯ್ಕವಾಡಿ ಮತ್ತು ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಮೆನ್ ಇಂಡಿಯಾ ಮೂಮೆಂಟ್ ನ ಜಿಲ್ಲಾಧ್ಯಕ್ಷೆ, ಜಿಲ್ಲಾ ಕಾರ್ಯದರ್ಶಿ ಮತ್ತು ಎಲ್ಲಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.




