ಬೆಂಗಳೂರು: ಕರ್ನಾಟಕ ಕೊಳಗೇರಿ ನಿರ್ಮೂಲನಾ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಶಾಸಕ ಸಿದ್ದು ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು. ಮುಖ್ಯಮಂತ್ರಿಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು, ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36789 ಮನೆ ಹಂಚಿಕೆ ಮಾಡಿ ಎರಡನೇ ಹಂತದಲ್ಲಿ 40345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ ಎಂದರು.
ಮುಖ್ಯಮಂತ್ರಿಯವರು2026 ರೊಳಗೆ ಪೂರ್ಣಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಅರವಿಂದ್ ಬೆಲ್ಲದ್ ಅವರ ಉಪ ಪ್ರಶ್ನೆಗೆ ಉತ್ತರಿಸಿದ ಅವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬಗಳಿಗೆ 47,870 ಮನೆ ನಿರ್ಮಾಣ ಯೋಜನೆ ಸಹ ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ, ಆ ವಿಚಾರ ಸಹ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದು, ಸರ್ಕಾರವೇ ವಂತಿಗೆ ಭರಿಸಲು ತಾತ್ವಿ ಕ ಒಪ್ಪಿಗೆ ದೊರೆತಿದ್ದು ಸಂಪುಟಕ್ಕೆ ತಂದು ಒಪ್ಪಿಗೆ ಪಡೆಯಲಾಗುವುದು. ಆ ಮನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುವುದು ಎಂದರು.




