ಬೆಂಗಳೂರು: ರಾಜ್ಯದ 7 ಜಿಲ್ಲೆಗಳ 500 ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ನೆರವಿನ ಯೋಜನೆ ಸಿದ್ಧಗೊಂಡಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಅಧಿಕಾರಿಗಳೊಂದಿಗೆ ಆನ್ ಲೈನ್ ಸಭೆಯಲ್ಲಿ ಮಾತನಾಡಿದ ಅವರು, ಕೆರೆಗಳ ಹೂಳು ತೆಗೆಯುವುದು, ಏರಿ ದುರಸ್ತಿ ಹಾಗೂ ಎತ್ತರಿಸುವುದು, ನಾಲೆಗಳ ಪುನಶ್ಚೇತನ ಮತ್ತು ಸೌಂದರ್ಯೀಕರಣ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿತ ಸಿಇಒಗಳಿಗೆ ಸೂಚಿಸಿದರು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ, ಜಲಮೂಲಗಳ ಸಂರಕ್ಷಣೆ ಮತ್ತು ಅಂತರ್ಜಲ ಹೆಚ್ಚಳಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಅಧಿಕಾರಿಗಳು ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಕಲುಷಿತ ನೀರಿನ ದೂರು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅದೇ ರೀತಿ, ವಿಬಿಜಿ ರಾಮ್ ಜಿ ಯೋಜನೆಯಡಿ ಕಾಮಗಾರಿಗಳಿಗೆ ವೇಗ ನೀಡುವುದರ ಜೊತೆಗೆ, ಕೆಲಸ ಮಾಡಿದ ಕಾರ್ಮಿಕರಿಗೆ 15 ದಿನಗಳೊಳಗೆ ಕೂಲಿ ಪಾವತಿಯಾಗುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.




