ಜಲಜೀವನ್ ಮಿಷನ್ 24*7 ನೀರು ಪೂರೈಕೆ ಯೋಜನೆ ಸಫಲ
ಗ್ರಾಮಗಳು ಸ್ವಾವಲಂಬಯತ್ತ ಸಾಗಲಿ
ದಾವಣಗೆರೆ: ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ರೂಪಿಸಿ 24*7 ಮಾದರಿ ಸ್ವಾವಲಂಬನೆಯತ್ತ ಗ್ರಾಮಗಳು ಮುನ್ನಡೆಯುವ ಆಯಾಮ ಎಂದು ವಿಶ್ವಬ್ಯಾಂಕ್ ಟಾಸ್ಕ್ ಪೋರ್ಸ್ ತಂಡದ ಸದಸ್ಯರು ಹಾಗೂ ಪೀಡ್ ಬ್ಯಾಕ್ ಸಂಸ್ಥೆಯ ಕಾರ್ಯನಿರ್ವಹಣ ಅಧಿಕಾರಿ ಅಜಯ್ ಸಿಂಹ ತಿಳಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನ್ಯಾಮತಿ ತಾಲ್ಲೂಕಿನ ಗಂಗನಕೋಟೆ ಗ್ರಾಮ ಪಂಚಾಯಿತಿ ದಾನಿಹಳ್ಳಿಗೆ ಜಲಜೀವನ್ ಮಿಷನ್ ಯೋಜನೆ 24*7 ಕುಡಿಯುವ ನೀರಿನ ಯೋಜನೆಯ ಕಾರ್ಯಚಟುವಟಿಕೆ ವೀಕ್ಷಣೆ ಮಾಡಿ ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಹರ್ ಘರ್ ಜಲ್ ಘೋಷವಾಕ್ಯದಡಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಶುದ್ಧ ಕುಡಿಯುವ ನೀರನ್ನು ನಾವು ಪ್ರತಿ ಲೀಟರ್ ಗೆ ರೂ.20 ಕೊಟ್ಟು ಖರೀದಿಸಿ ಕುಡಿಯುತ್ತೇವೆ. ಆದರೆ ಜೆಜೆಎಂ ಯೋಜನೆಯಡಿ ಶುದ್ಧ ಕುಡಿಯುವ ನೀರನ್ನು ಪ್ರತಿ ಲೀಟರ್ ಗೆ 1 ಪೈಸೆಯಂತೆ ಪೂರೈಕೆ ಮಾಡಲಾಗುತ್ತಿದೆ. ಗ್ರಾಮಕ್ಕೆ ಬರುವ ಹೊಸ ಅತಿಥಿಗಳಿಗೆ ಹೊರಗಿನ ನೀರನ್ನು ಹಣಕೊಟ್ಟು ಖರೀದಿಸಿ ನೀಡುವ ಬದಲಿಗೆ ನಿಮ್ಮ ಮನೆಯಲ್ಲಿನ ಶುದ್ಧ ನೀರನ್ನು ಸ್ಟೀಲ್ ಕಪ್ಗಳಲ್ಲಿ ಕೊಡುವಂತಾಗುವುದೇ ಗ್ರಾಮಗಳ ಸ್ವಾವಲಂಬಿ ಯೋಜನೆಯಾಗಿದೆ ಎಂದರು.
ವಿಶ್ವಬ್ಯಾಂಕ್ ಟಾಸ್ಕ್ ಪೊರ್ಸ್ ಪ್ರತಿನಿಧಿ ಮರಿಯಪ್ಪ ಕುಳ್ಳಪ್ಪ ಮಾತನಾಡಿ, ವಿದೇಶಗಳಲ್ಲಿ ಇಲ್ಲಿನಂತೆ ನೀರನ್ನು ಬಾಟಲಿಯಲ್ಲಿ ಇಟ್ಟಿರುವುದಿಲ್ಲ. ನಿರಂತರವಾಗಿ ನೀರು ಕುಡಿಯಲು ಟ್ಯಾಪ್ಗಳನ್ನು ಅಳವಡಿಸಲಾಗಿರುತ್ತದೆ. ನಮ್ಮ ಗ್ರಾಮಗಳು ಅದೇ ರೀತಿ ಮುಂದುವರೆದು ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯತೆ ಕಾಪಾಡಿಕೊಳ್ಳಬೇಕು. ಶುದ್ದ ನೀರಿನ ಬಳಕೆ ಜೊತೆಗೆ ನೀರಿನ ಮಿತ ಬಳಕೆಯು ಬಹಳ ಪ್ರಮುಖವಾಗಿರುತ್ತದೆ. ಜಿಲ್ಲೆಯ 10 ಗ್ರಾಮಗಳಲ್ಲಿ 24*7 ಮಾದರಿಯಲ್ಲಿ ನೀರು ಪೂರೈಕೆಗೆ ಯೋಜನೆ ರೂಪಿಸಲಾಗಿದ್ದು ಮುಂದಿನ 6 ತಿಂಗಳಲ್ಲಿ 100 ಗ್ರಾಮಗಳಲ್ಲಿ ನಿರಂತರ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ 881 ಕಾಮಗಾರಿಗಳನ್ನು ತೆಗೆದುಕೊಂಡಿದ್ದು ಇದರಲ್ಲಿ ಇತರೆ ಕಾರಣದಿಂದ ಕೆಲವು ಕಾಮಗಾರಿಗಳನ್ನು ಕೈಬಿಡಲಾಗಿದೆ. 630 ಕಾಮಗಾರಿಗಳಲ್ಲಿ 400 ಕಾಮಗಾರಿಗಳು ಬಹಳ ಉತ್ತಮವಾಗಿವೆ. ಅನುಷ್ಠಾನದಲ್ಲಿನ ಕೆಲವು ಲೋಪದೋಷಗಳನ್ನು ಸರಿಪಡಿಸಿ ಸಮರ್ಪಕವಾಗಿ ಯೋಜನೆ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಗ್ರಾಮ ನೀರು, ನೈರ್ಮಲ್ಯ ಸಮಿತಿ ಸಭೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕರೆಯಬೇಕೆಂದು ಮಾರ್ಗಸೂಚಿ ಸಿದ್ಧಪಡಿಸಿ ಇದಕ್ಕಾಗಿ ಪ್ರತ್ಯೇಕ ಖಾತೆಯನ್ನು ತೆರೆಯುವ ಮೂಲಕ ಸಮಿತಿಯಿಂದ ಕಾಲಕಾಲಕ್ಕೆ ಗ್ರಾಮದಲ್ಲಿ ಕುಡಿಯುವ ನೀರು ಪರೀಕ್ಷೆ ಮಾಡಿಸುವುದು ಸೇರಿದಂತೆ ಎಲ್ಲಾ ನಿರ್ವಹಣೆಯನ್ನು ಮಾಡಲು ಅವಕಾಶ ಕಲ್ಪಿಸಿ ನೀರಿನ ಶುಲ್ಕವನ್ನು ಪಡೆದುಕೊಳ್ಳಲು ಆನ್ಲೈನ್ ಬಿಲ್ಲಿಂಗ್ ಹಾಗೂ ಪಾವತಿಗೂ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿರುವುದರಿಂದ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳ ಸಂಖ್ಯೆ ಇಳಿಮುಖವಾಗಿದೆ. ಜಲಜೀವನ್ ಮಿಷನ್ ಯೋಜನೆಯಿಂದ ಜನರ ಆರೋಗ್ಯದ ಸಮಸ್ಯೆಗಳು ಸುಧಾರಣೆಯಾಗಿದೆ ಎಂದರು.
ದಾನಿಹಳ್ಳಿಯಲ್ಲಿ 337 ಮನೆಗಳಿಗೆ ನಲ್ಲಿ ಅಳವಡಿಸಲಾಗಿದೆ. 3 ನೇ ಹಂತದ ಜೆಜೆಎಂ ಯೋಜನೆಯಲ್ಲಿ ರೂ.95 ಲಕ್ಷದಲ್ಲಿ ಪ್ರತಿ ಮನೆಗೂ 24*7 ಮಾದರಿಯಲ್ಲಿ ನೀರು ಪೂರೈಸಲಾಗುತ್ತಿದೆ ಎಂದರು.
ನೀರುಗಂಟಿ ಸ್ಮಾರ್ಟ್ ಕೆಲಸ; ಗ್ರಾಮದ ನೀರಗಂಟಿ ಉಮೇಶ್ ತಂಡಕ್ಕೆ ಮಾದರಿಯಾದರು. ಪಂಪ್ಹೌಸ್ಗಳಲ್ಲಿ ಸ್ಮಾರ್ಟ್ ಸ್ಟಾರ್ಟರ್ ಅಳವಡಿಸಿದ್ದು ಅದನ್ನು ತನ್ನ ಮೊಬೈಲ್ ಅಪ್ಲಿಕೇಷನ್ ಮೂಲಕ ಮೋಟಾರು ಚಾಲನೆ ಮಾಡುವುದು, ಆಫ್ ಮಾಡುವುದನ್ನು ಮಾಡುತ್ತಾರೆ.
ರಾತ್ರಿವೇಳೆ ಏಕಾಂಗಿಯಾಗಿ ಪಂಪ್ಹೌಸ್ ಬಳಿ ಹೋಗಿ ಕೆಲಸ ಮಾಡುವುದು ಕಷ್ಟವಾಗುವುದರಿಂದ ಮೊಬೈಲ್ ಮೂಲಕವೇ ನಿರ್ವಹಣೆ ಮಾಡುವರು. ಇದರಿಂದ ನೀರಿನ ಮಿತ ಬಳಕೆ, ಮೋಟಾರ್ ಸುಸ್ಥಿತಿ ಜೊತೆಗೆ ಬಹಳ ಸುಲಭವಾಗಿ ನಿರ್ವಹಣೆ ಮಾಡಲು ಸಾಧ್ಯವಾಗಿದೆ ಎಂಬ ಮಾಹಿತಿ ಪಡೆದ ತಂಡ ನೀರುಗಂಟೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿತು.
ಈ ವೇಳೆ ಗ್ರಾಮೀಣ ನೀರು ಪೂರೈಕೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೋಮ್ಲಾನಾಯ್ಕ, ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ, ಪ್ರಕಾಶ್ ಹಾಗೂ ಇನ್ನಿತರರು ಇದ್ದರು.




