ಮಂಗಳೂರು: ಪ್ರಪಂಚದಲ್ಲಿ ಅತೀ ಹೆಚ್ಚು ಮುದ್ರಿತವಾಗಿರುವ ಪುಸ್ತಕಗಳ ಪೈಕಿ ಕಮ್ಯುನಿಸ್ಟ್ ಪ್ರಣಾಳಿಕೆ ಮೂರನೆಯ ಸ್ಥಾನವನ್ನು ಹೊಂದಿದೆ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟ್ಟು ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅಂತರಾಷ್ಟ್ರೀಯ ಕೆಂಪು ಪುಸ್ತಕ ದಿನಾಚರಣೆಯ ಅಂಗವಾಗಿ CPIM ತೊಕ್ಕೋಟ್ಟು ಕಚೇರಿಯಲ್ಲಿ ಜರುಗಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಲ್ ಮಾರ್ಕ್ಸ್ ಹಾಗೂ ಎಂಗೆಲ್ಸ್ ರವರ ಕಮ್ಯುನಿಸ್ಟ್ ಪ್ರಣಾಳಿಕೆ ಸಮಾಜವನ್ನು ಅಮೂಲಾಗ್ರವಾಗಿ ಬದಲಾಯಿಸುವ ವೈಜ್ಞಾನಿಕ ಪುಸ್ತಕವಾಗಿದೆ. ಹಾಗೂ ಅದು ಪ್ರಕಟವಾದ ದಿನವಾದ 1848ರ ಫೆಬ್ರವರಿ 21 ನ್ನು ಅಂತರಾಷ್ಟ್ರೀಯ ಕೆಂಪು ಪುಸ್ತಕ ದಿನವನ್ನಾಗಿ ಆಚರಿಸಲಾಗುತ್ತಿದೆ.177 ವರ್ಷಗಳ ಹಿಂದೆ ಪ್ರಕಟವಾದ ಕಮ್ಯುನಿಸ್ಟ್ ಪ್ರಣಾಳಿಕೆಯು ಜ್ಯೋತಿಷ್ಯವೂ ಅಲ್ಲ, ಬ್ರಹ್ಮನ ಕಾಲಜ್ಞಾನವೂ ಅಲ್ಲ.ಅದು ಭವಿಷ್ಯದ ಸೂಚಕವಾಗಿದ್ದು, ಅದರಲ್ಲಿರುವ ಪ್ರತಿಯೊಂದು ಅಂಶಗಳೂ ಇಂದಿಗೂ ಪ್ರಸ್ತುತವಾಗಿದೆ ಎಂದು ಅಭಿಪ್ರಾಯಪಟ್ಟರು.
ಪ್ರಗತಿಪರ ಚಿಂತಕ ರಮೇಶ್ ಉಳ್ಳಾಲ ಮಾತನಾಡಿ, ದುಡಿಯುವ ವರ್ಗದ ಕಲ್ಯಾಣ ರಾಜ್ಯ ಉದಯವಾಗುವುದು ಅನಿವಾರ್ಯ ಬೆಳವಣಿಗೆಯಾಗಿದೆ ಎಂದು ಮಾರ್ಕ್ಸ್ ಈ ಮೊದಲೇ ಹೇಳಿದ್ದು,ಅದಕ್ಕಾಗಿ ಬಂಡವಾಳದಾರರಿಗೆ ಕಾರ್ಲ್ ಮಾರ್ಕ್ಸ್, ಕಮ್ಯುನಿಸಂ, ದುಡಿಯುವ ವರ್ಗದ ಪ್ರಭುತ್ವ ಎಂದರೆ ಪರಮದ್ವೇಷ. ಅದಕ್ಕಾಗಿ ಈ ಬಂಡವಾಳದಾರರು ಜಾಗತಿಕ ಮಟ್ಟದಲ್ಲಿ ತನ್ನೆಲ್ಲ ಶಕ್ತಿಯನ್ನು ಕ್ರೋಢೀಕರಿಸಿ ಕಮ್ಯುನಿಸಂನ ವಿರುಧ್ಧ ಭಾರೀ ಅಪಪ್ರಚಾರವನ್ನು ನಡೆಸುತ್ತಿದ್ದಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ CPIM ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಕಮ್ಯುನಿಸ್ಟ್ ಪ್ರಣಾಳಿಕೆ ಕಮ್ಯುನಿಸ್ಟರಿಗೆ ಮಾತ್ರ ಒಂದು ದಾಖಲೆಯಲ್ಲ, ಬದಲಾವಣೆಯನ್ನು ಬಯಸುವ ಎಲ್ಲರಿಗೂ ಆಶಾದಾಯಕವಾದ ಮಹಾಕಾವ್ಯವಾಗಿದೆ. ಬಂಡವಾಳಶಾಹಿ ವ್ಯವಸ್ಥೆಯಿಂದ ಸೃಷ್ಟಿಯಾದ ಹಸಿವು ಬಡತನ ಅನಕ್ಷರತೆ ನಿರುದ್ಯೋಗ ಮುಂತಾದ ಅನಿಷ್ಠಗಳ ವಿರುದ್ಧದ ಅತ್ಯುತ್ತಮ ಔಷಧವಾಗಿದೆ ಈ ಕಮ್ಯುನಿಸ್ಟ್ ಪ್ರಣಾಳಿಕೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ಹಿರಿಯ ಕಮ್ಯುನಿಸ್ಟ್ ನಾಯಕ ಕೃಷ್ಣಪ್ಪ ಸಾಲ್ಯಾನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್, CPIM ಹಿರಿಯ ಮುಖಂಡರಾದ ಸುಂದರ ಕುಂಪಲ,ಯು ಬಿ ನಾರಾಯಣ, CPIM ಉಳ್ಳಾಲ ವಲಯ ಸಮಿತಿ ಸದಸ್ಯರಾದ ರೋಹಿದಾಸ್ ಭಟ್ನಗರ, ಜನಾರ್ದನ ಕುತ್ತಾರ್, ಪ್ರಮೋದಿನಿ ಕಲ್ಲಾಪು, ವಿಲಾಸಿನಿ, ಇಬ್ರಾಹಿಂ ಮದಕ ಮುಂತಾದವರು ಹಾಜರಿದ್ದರು.




