ಪರಿಸರ ಸ್ನೇಹಿ ಗಣಪತಿಯನ್ನು ಪೂಜಿಸಿ: ಈಶ್ವರ್ ಖಂಡ್ರೆ

3 years ago

#Worship #Lord #Ganesha #ecofriendly #IshwarKhandre

ಬೆಂಗಳೂರು: ಪ್ರಕೃತಿ ಪರಿಸರ ಉಳಿಸಬೇಕಾದ್ದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಪರಿಸರ ಸ್ನೇಹಿಯಾದ ರಾಸಾಯನಿಕ ಬಣ್ಣ ರಹಿತ ಮಣ್ಣಿನ ಗಣಪತಿ ಪೂಜಿಸಿ ಎಂದು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದರು.

ವನ್ಯ ಜೀವಿಗಳ ಹಾವಳಿ ತಡೆಗಟ್ಟುವ ಸಂಬಂಧ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅರಣ್ಯ ಘಟಕದ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲ ಮೂಲಗಳನ್ನು ನಾಶ ಮಾಡುವ ರಾಸಾಯನಿಕ ಬಣ್ಣ ಬಳಿದ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ತಯಾರಿಸಿದ ಗಣಪತಿಗಳನ್ನು ಖರೀದಿಸದಂತೆ ಮನವಿ ಮಾಡಿದರು.

ಪರಿಸರ ಇಲಾಖೆಯಲ್ಲಿ ಕೆಲವೊಂದು ಸುಧಾರಣೆ ಅನಿವಾರ್ಯವಾಗಿದೆ. ಪಾರದರ್ಶಕವಾಗಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯ ನಿರ್ವಹಿಸುವಂತೆ ಮಾಡಲು ಸರ್ಕಾರ ಕೆಲವೊಂದು ಮಾರ್ಪಾಡು ಮಾಡಿದೆ ಎಂದರು.

Leave a Reply