ಬೆಂಗಳೂರು: ನಟ ದರ್ಶನ್ ಪ್ರಕರಣದಲ್ಲಿ ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರ ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿಯ ಕೊಲೆ ಮಾಡಿರುವುದು ಹೀನ, ಅತ್ಯಂತ ಹೇಯ ಕೃತ್ಯ. ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ಒದಗಿಸಿಕೊಡಬೇಕು. ಆದ್ದರಿಂದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದರು.
ಇದು ಗಂಭೀರ ಪ್ರಕರಣವಾಗಿರುವುದರಿಂದ ಎಲ್ಲಾ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸುತ್ತೇವೆ. ಈ ಪ್ರಕರಣದ ಗಂಭೀರತೆ ಅರಿತು ವಿಜಯನಗರ ಉಪವಿಭಾಗದ ಎಸಿಪಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಆ ವಿಭಾಗದ ಎಲ್ಲಾ ಇನ್ಸ್ ಪೆಕ್ಟರ್ ಗಳು ಹಾಗೂ ಸಿಬ್ಬಂದಿ ತನಿಖಾ ತಂಡದಲ್ಲಿದ್ದಾರೆ. ಪ್ರಕರಣದಲ್ಲಿ ಸೆಲೆಬ್ರೆಟಿಗಳು ಇರುವುದರಿಂದ ಬಹಳ ಜಾಗರೂಕತೆಯಿಂದ ಹಲವು ಸಾಕ್ಷ್ಯಾಧಾರಗಳನ್ನು ಕಲೆಹಾಕಲಾಗುತ್ತಿದೆ ಎಂದರು.
ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆ ತರಲಾಗಿದೆ. ಕೆಲವು ಆರೋಪಿಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಆದ್ದರಿಂದ ಚಿತ್ರದುರ್ಗ, ಮೈಸೂರು, ಬೆಂಗಳೂರು ನಗರ ಹಾಗೂ ಇನ್ನಿತರ ಕಡೆ ತನಿಖೆ ಮತ್ತು ಸ್ಥಳ ಮಹಜರು ಮಾಡಬೇಕಾಗಿದೆ. ಆದ್ದರಿಂದ ಹಲವು ಆಯಾಮಗಳಲ್ಲಿ ಒಬ್ಬೊಬ್ಬ ಇನ್ಸ್ ಪೆಕ್ಟರ್ ಒಂದೊಂದು ಕಡೆ ಹೋಗಿ ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆ ಎಂದು ಪ್ರಕರಣದ ಕುರಿತು ಮಾಹಿತಿ ನೀಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಸೆಲೆಬ್ರಿಟಿ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದ್ದು, ಕೂಲಂಕುಷವಾಗಿ ತನಿಖೆ ಮಾಡಲಾಗುತ್ತಿದೆ. ನಾವು ಈ ಪ್ರಕರಣವನ್ನು ಕಾನೂನಿನ ಮುಂದೆ ತೆಗೆದುಕೊಂಡು ಹೋಗಬೇಕಾಗಿದೆ. ದಯವಿಟ್ಟು ತಾಳ್ಮೆ, ಸಹನೆಯಿಂದ ನಮ್ಮೊಂದಿಗೆ ಸಹಕರಿಸಿದರೆ ಸಮಗ್ರವಾಗಿ ತಾತ್ವಿಕ ಹಂತಕ್ಕೆ ಈ ಪ್ರಕರಣವನ್ನು ತೆಗೆದುಕೊಂಡು ಹೋಗಲು ಸಹಕಾರಿಯಾಗುತ್ತದೆ. ನಾವೆಲ್ಲರೂ ಸೇರಿ ಜವಾಬ್ದಾರಿಯಿಂದ ಈ ಪ್ರಕರಣವನ್ನು ಬಗೆಹರಿಸಬೇಕಿದೆ ಎಂದರು.




