ಡಿ.10 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

2 years ago

#Written #test #post #police #constable

ಬಳ್ಳಾರಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್(ಸಿವಿಲ್) (ಪುರುಷ ಮತ್ತು ಮಹಿಳಾ) (ತೃತೀಯ ಲಿಂಗಿ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-454 ಹುದ್ದೆಗಳಿಗೆ ಡಿಸೆಂಬರ್ 10 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

ಲಿಖಿತ ಪರೀಕ್ಷೆಗಳನ್ನು ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.

ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆ ಪತ್ರದ ಲಿಂಕ್ ಅನ್ನು ಸಹ ಕಳಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಜಿಲ್ಲೆಯಲ್ಲಿ ಡಿ.01ರಿಂದ 06ರವರೆಗೆ ಅಖಿಲ ಭಾರತ ವೃತ್ತಿ ಪರೀಕ್ಷೆ (ಪೂರಕ) ಡಿಸೆಂಬರ್-2023 ರ ವೃತ್ತಿ ಪ್ರಾಯೋಗಿಕ ಮತ್ತು ತಾಂತ್ರಿಕ ರೇಖಾ ಚಿತ್ರ ವಿಷಯಗಳ, ಅನುತ್ತೀರ್ಣ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆ ಹಾಗೂ Left Over ತರಬೇತುದಾರರಿಗೆ (CTS & DTS System) ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.

ಡಿ.01ರಿಂದ 06ರವರೆಗೆ ಬೆಳ್ಳಿಗ್ಗೆ 09ಗಂಟೆಯಿಂದ ಮಧ್ಯಾಹ್ನ 02.30 ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಅವರು ಆದೇಶಿಸಿದ್ದಾರೆ.

ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದ್ದು, ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply