ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿ. ಆದರೆ ಇಂತಹ ವ್ಯಕ್ತಿಯೇ ತಮ್ಮ ತವರು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಬಗ್ಗೆ ಪ್ರಸ್ತಾಪಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಮೈಸೂರಿನಲ್ಲಿ ಬಗರ್ ಹುಕುಂ ಸಾಗುವಳಿ ಚೀಟಿ ಪಡೆದಿರುವ ಫಲಾನುಭವಿ ರೈತರುಗಳಿಗೆ ತಮ್ಮ ಜಮೀನಿನ ಖಾತೆ ಮಾಡಿಕೊಡಲು ಅಧಿಕಾರಿಗಳು ಲಂಚ್ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನಲ್ಲಿ ಆಪಾದಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಮತ್ತು ಇತರೆ ದಾಖಲಾತಿ ಮಾಡಿಕೊಡುವ ಸಂಬಂಧ ಪ್ರಶ್ನೆ ಕೇಳಿದ ಯತೀಂದ್ರ ಸಿದ್ದರಾಮಯ್ಯ, ಮೈಸೂರಿನಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಮಾಡಿಕೊಡುತ್ತಿಲ್ಲ ಎಂದರು.
ಫಲಾನುಭವಿಗಳು ಖಾತೆ ಮಾಡಿ ಕೊಡುವಂತೆ ಕೋರಿ ಅರ್ಜಿ ಹಾಕಿ, ಹಣ ಕಟ್ಟಿದ ಮೇಲೆಯೂ ಖಾತೆ ಮಾಡಿಕೊಡುತ್ತಿಲ್ಲ. ಮೈಸೂರಿನಲ್ಲಿ ಈ ವಿಚಾರವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ತಮ್ಮ ಸರ್ಕಾರದ ವಿರುದ್ಧವೇ ಮಾತನಾಡಿದರು.
ಫಲಾನುಭವಿ ರೈತರು ತಮ್ಮ ಜಮೀನಿನ ಖಾತೆ ಮಾಡಿಸಲು ಲಂಚ ಕೊಡುವ ಪರಿಸ್ಥಿತಿ ಬಂದಿದೆ. 30-35 ವರ್ಷಗಳಿಂದ ಖಾತೆ ಆಗಿಲ್ಲ ಎಂದು ಅಳಲು ತೋಡಿಕೊಂಡ ಅವರು, ಸಾಗುವಳಿ ಚೀಟಿ ಕೊಟ್ಟವರಿಗೆ ಕೂಡಲೇ ಖಾತೆ ಮಾಡಿಕೊಡಬೇಕು. ಖಾತೆ ಮಾಡಿ ಕೊಡುವುದಕ್ಕೆ ಒಂದು ಕಾಲ ಮಿತಿಯನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಸಾಗುವಳಿ ಚೀಟಿ ಕೊಟ್ಟವರಿಗೆ ಇನ್ನೂ ಖಾತೆ ಆಗಿಲ್ಲ ಅನ್ನೋದು ಸತ್ಯ. 20-30 ವರ್ಷಗಳಿಂದ ಸಾಗುವಳಿ ಚೀಟಿ ಇದ್ದರೂ ಖಾತೆ ಮಾಡಿಕೊಡಲು ಆಗಿಲ್ಲ. ನೈಜವಾಗಿ ಇರುವ ಕೇಸಲ್ಲಿ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ. ಅಧಿಕಾರಿಗಳಿಗೂ ಖಾತೆ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದರು.
ಲಂಚ ಪಡೆಯುತ್ತಿದ್ದಾರೆ ಎಂಬ ಯತೀಂದ್ರ ಹೇಳಿಕೆ ಕುರಿತು ಮಾತನಾಡಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಎಂ ಪುತ್ರರೇ ಸಾಗುವಳಿ ಚೀಟಿಗೆ ಖಾತೆ ಪಡೆಯಲು ಲಂಚ ಕೊಡಬೇಕು ಎಂದು ಹೇಳಿದ್ದಾರೆ. ಯಾರಿಗೆ ಲಂಚ ಕೊಡಬೇಕು ಅದನ್ನು ಸಚಿವರು ಹೇಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ತಮ್ಮ ಮಾತಿಗೆ ವಿವರಣೆ ಕೊಟ್ಟ ಯತೀಂದ್ರ, ಲಂಚ ಎನ್ನುವುದು ಎಲ್ಲಾ ಕಡೆಯಲ್ಲೂ ಇದೆ. ಬಗರ್ ಹುಕುಂ ಸಮಿತಿಗೆ ಸ್ಥಳೀಯ ಶಾಸಕರೇ ಅಧ್ಯಕ್ಷರಾಗಿರುತ್ತಾರೆ. ಅಧಿಕಾರಿಗಳಿಗೆ ಹೇಳಿದರೂ ಅವರು ಮಾಡಿಕೊಡುವುದಿಲ್ಲ. ಇದು ಸರ್ಕಾರದ ಹಂತದಲ್ಲಿ ಅಲ್ಲ. ಸ್ಥಳೀಯವಾಗಿ ವಿಳಂಬವಾಗಿದೆ ಎಂದು ಸ್ಪಷ್ಟಪಡಿಸಿದರು.




