ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ತೆರವು ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬೆನ್ನಲ್ಲೇ ದಾಖಲೆಗಳೊಂದಿಗೆ ಬಿಜೆಪಿ ವಿರುದ್ಧ ಪ್ರತಿ ಹೋರಾಟಕ್ಕೆ ಕಾಂಗ್ರೆಸ್ ತಂತ್ರ ರೂಪಿಸಿದೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ 2,900 ಎಕರೆ ಒತ್ತುವರಿ ತೆರವಿನ ವಕ್ಫ್ ನೋಟಿಸ್ ಜಾರಿಯಾಗಿತ್ತು. ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಕಾಲದಲ್ಲಿ ನೋಟಿಸ್ ಅನ್ನು ಅನುಮೋದನೆ ಮಾಡಿದ್ದರು ಎಂದು ಗೃಹಸಚಿವ ಜಿ. ಪರಮೇಶ್ವರ್ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕಾಗಿಯೇ ಶಾಸಕ ಯತ್ನಾಳ್ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ ಇಳಿದಿದ್ದಾರೆ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ವಕ್ಫ್ ನೊಟೀಸ್ ಕೊಟ್ಟಿರುವ ವಿಚಾರ ಹಾಗೂ ವಕ್ಫ್ ವಿರೋಧಿಸಿ ಬಿಜೆಪಿಯ ರೆಬಲ್ಸ್ ಟೀಂ ಹೋರಾಟಕ್ಕೆ ಪ್ರತಿಕ್ರಿಯಿಸಿದ ಅವರು, ಜಾಸ್ತಿ ದಿನ ಸತ್ಯ ಮುಚ್ಚಿಡಲು ಆಗುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ನೊಟೀಸ್ ಕೊಟ್ಟಿರೋ ಬಗ್ಗೆ ಆರೋಪ ಮಾಡ್ತಿದ್ರು. ಆದರೆ ಇವರು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ರು? ಎಂದು ಪ್ರಶ್ನಿಸಿದರು.
ಕುಮಾರ್ ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿ ವಕ್ಫ್ ನೊಟೀಸ್ ಜಾರಿ ಮಾಡಿದ್ದಾರೆ. ಈ ಸಮಿತಿ 2,900 ಎಕರೆಗೆ ನೊಟೀಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಅವಧಿಯಲ್ಲಿ 300 ಎಕರೆಗೆ ನೊಟೀಸ್ ಜಾರಿ ಆಗಿದೆ. ಯಾರ ಅವಧಿಯಲ್ಲಿ ನೊಟೀಸ್ ಜಾಸ್ತಿ ಜಾರಿ ಮಾಡಿದ್ದಾರೆ ಎಂದು ಗೊತ್ತಾಯ್ತಲ್ಲ ಎಂದರು.
ನಾವು ಯಾರ ಮೇಲೆ ಆರೋಪ ಮಾಡಬೇಕು? ಈಗ ಬಿಜೆಪಿಯವರು ವಕ್ಫ್ ವಿಚಾರದಲ್ಲಿ ರಾಜ್ಯ ಪ್ರವಾಸ ಮಾಡಲು ಹೊರಟಿದ್ದಾರಲ್ಲ, ಇದು ಮೊದಲು ಅವರಿಗೆ ಅರ್ಥ ಆಗಬೇಕು ಎಂದರು.
ಬಹುಶಃ ಯತ್ನಾಳ್ ಟೀಮ್ ಹೊರಟಿರೋದು ಬಿಜೆಪಿಯವರಿಗೆ ಮುಖಭಂಗ ಮಾಡೋದಕ್ಕೆ. ಬಿಜೆಪಿಯವರು ಹೆಚ್ಚು ನೊಟೀಸ್ ಕೊಟ್ಟಿದ್ದಾರೆ ಎಂದು ಗೊತ್ತಾದ ಮೇಲೂ ಇವರು ಪ್ರವಾಸ ಹೊರಟಿದ್ದಾರೆ ಎಂದರೆ ಬಿಜೆಪಿಯವರಿಗೆ ಮುಜುಗರ ಮಾಡಲು ಹೊರಟಿದ್ದಾರೆ ಎಂದರ್ಥ ಅಲ್ಲವೆ ಎಂದು ಕೇಳಿದರು.




