ಬೆಂಗಳೂರು: ಬಿಡಿಎಗೆ ಸೇರಿದ ನೂರಾರು ಕೋಟಿ ಬೆಲೆಬಾಳುವ 55,000 ಚದರ ಅಡಿ ಭೂಮಿಯ ಡಿನೋಟಿಫೈ. ಒಂಭತ್ತು ವರ್ಷಗಳ ಹಿಂದೆಯೇ ಲೋಕಾಯುಕ್ತದಲ್ಲಿ ದಾಖಲಾದ ಈ ಪ್ರಕರಣದಲ್ಲಿ ಮೊದಲ ಆರೋಪಿ ಯಡಿಯೂರಪ್ಪ. ಎರಡನೇ ಆರೋಪಿ ಕುಮಾರಸ್ವಾಮಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈದಿನ ಸುದ್ದಿ ಸಂಸ್ಥೆ ವರದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ಪ್ರತಿಕ್ರಿಯೆ ನೀಡಿರುವ ಅವರು, BJP Karnataka ಮತ್ತು Janata Dal Secular ಸಮ್ಮಿಶ್ರ ಸರ್ಕಾರದ ಈ ಜಂಟಿ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿಗಳೇ ಶಾಮೀಲಾಗಿದ್ದಾರೆ. ಒಂಭತ್ತು ವರ್ಷಗಳಿಂದ ಈ ಪ್ರಕರಣ ಲೋಕಾಯುಕ್ತದಲ್ಲಿ ಯಾಕೆ ಮೂಲೆಗುಂಪಾಗಿದೆ? ಇದರ ಹಿಂದೆ ಯಾರ ಒತ್ತಡವಿದೆ? ಎಂದು ಪ್ರಶ್ನಿಸಿದ್ದಾರೆ.
ನೂರಾರು ಕೋಟಿ ಮೌಲ್ಯದ ಜಮೀನು ಡಿನೋಟಿಫೈ ಮಾಡುವಲ್ಲಿ ಯಡಿಯೂರಪ್ಪ ಹಿಂದೆ ಇದ್ದದ್ದು ಬಿಜೆಪಿ ರಾಜ್ಯಾಧ್ಯಕ್ಷ, ಭ್ರಷ್ಟಾಚಾರದ ಪಿತಾಮಹ ವಿಜಯೇಂದ್ರ ಅವರೇ ಅಲ್ಲವೇ? ಪ್ರಕರಣದಲ್ಲಿ ಎರಡನೇ ಆರೋಪಿ ಆಗಿರುವ ಕುಮಾರಸ್ವಾಮಿ ರಾಜೀನಾಮೆ ನೀಡುವುದು ಯಾವಾಗ? ಎಂದು ಕೇಳಿದ್ದಾರೆ.
ಮುಡಾ ಹಗರಣದಲ್ಲಿ ಬೀದಿಗಿಳಿದು ಹೋರಾಟ ಮಾಡಿದವರು, ಪಾದಯಾತ್ರೆ ಮಾಡಿದವರು ಈ ಪ್ರಕರಣದ ಬಗ್ಗೆ ಏನು ಹೇಳುತ್ತಾರೆ? ಈ ಬಗ್ಗೆ ಯಡಿಯೂರಪ್ಪ & ಕುಮಾರಸ್ವಾಮಿಯವರು ರಾಜ್ಯದ ಜನತೆಗೆ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.




