ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ರಾಜ್ಯ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪ್ರಕರಣದ ವಿಚಾರಣೆಗೆ ಸಮನ್ಸ್ ಹೊರಡಿಸಿರುವ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ಸಂಜ್ಞೆಯನ್ನು ಪರಿಗಣಿಸಿ ಸಮನ್ಸ್ ಹೊರಡಿಸಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಹೈಕೋರ್ಟಿಗೆ ಮನವಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಐ ಅರುಣ್, ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು. ಅಲ್ಲದೆ ವಿಚಾರಣೆ ಹಂತದಲ್ಲಿ ಯಡಿಯೂರಪ್ಪ ಅವರ ಅಗತ್ಯವಿಲ್ಲದಿದ್ದರೆ ಅವರನ್ನು ವಿಚಾರಣೆಗೆ ಬರುವಂತೆ ಒತ್ತಾಯಿಸಬಾರದು ಎಂದು ಅರ್ಜಿದಾರರು ಮಾಡಿದ ಮನವಿಯನ್ನು ಪುರಸ್ಕರಿಸಿತು.
ಹೈ ಕೋರ್ಟ್ ತನ್ನ ಆದೇಶದಲ್ಲಿ ಅಧೀನ ನ್ಯಾಯಾಲಯ ಯಾವುದೇ ಪ್ರಭಾವಕ್ಕೆ ಒಳಗಾಗದೆ ತನ್ನ ಮುಂದೆ ಇರುವ ಸಾಕ್ಷಿಗಳನ್ನು ಆದರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ ನ್ಯಾಯ ಪೀಠ, ಆರೋಪ ಮುಕ್ತಿ ಸೇರಿದಂತೆ ಯಾವುದೇ ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯದ ಮುಂದೆ ಸಲ್ಲಿಸಲು ಅರ್ಜಿದಾರರಿಗೆ ಸ್ವತಂತ್ರ ಅವಕಾಶವಿದೆ ಎಂದಿತು.




