16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

4 years ago

ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಮನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಶನಿವಾರದವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ನಗರದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅ. 22 ಮತ್ತು 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ.

Leave a Reply