ಬೆಂಗಳೂರು: ಪ್ರಧಾನಿ ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘ವೀಕ್ ಪಿಎಂ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಹಾಲಿ ಸಿಎಂ ಸೂಪರ್ ಸಿಎಂ ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ನರೇಂದ್ರ ಮೋದಿ ಒಬ್ಬ ವೀಕ್ ಪಿಎಂ ಎಂದು ಟೀಕಿಸಿದ್ದಾರೆ.
ನೀವು ಅತ್ಯಂತ ದುರ್ಬಲ ಪ್ರಧಾನಿ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿ.ಎಸ್.ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು. ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘ವೀಕ್ ಪಿಎಂ’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ಬಿಜೆಪಿ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ” ಆಗಿರುವುದಲ್ಲವೇ ನರೇಂದ್ರ ಮೋದಿ? ಎಂದು ಪ್ರಶ್ನೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಕರ್ನಾಟಕ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘ವೀಕ್ ಪಿಎಂ’ ಅಲ್ಲದೆ ಮತ್ತೇನು? ಎಂದು ಕೇಳಿದ್ದಾರೆ.
ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಬಿಜೆಪಿ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ… ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ ನರೇಂದ್ರ ಮೋದಿ ಅವರೇ? ಎಂದು ಕೇಳಿದ್ದಾರೆ.




