ಗಾಂಜಾ, ಅಫೀಮು, ಅಮಲು ಪದಾರ್ಥಗಳ ಸೇವನೆ ಮುಂತಾದ ಅಭ್ಯಾಸಗಳಿಂದ ದೂರವಿರಬೇಕು
ಹಾಸನ: ಕನ್ನಡ ರಾಜ್ಯೋತ್ಸವ ಮತ್ತು ಶಹೀದೆ ಮಿಲ್ಲತ್ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ಹಾಸನ ಯುತ್ ಕರೇಜ್ (HYC) ತಂಡದ ವತಿಯಿಂದ ಹಾಸನದ ತಾಜ್ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಭಾಗವಹಿಸಿ ಯುವಕರ ಸೇವಾ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ, ಇಂದಿನ ಯುವ ಜನಾಂಗ ಗಾಂಜಾ, ಅಫೀಮು, ಅಮಲು ಪದಾರ್ಥಗಳ ಸೇವನೆ ಮುಂತಾದ ಅನಾರೋಗ್ಯಕರ ಅಭ್ಯಾಸಗಳಿಂದ ದೂರವಿದ್ದು, ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
HYC ತಂಡ ರಾಜ್ಯೋತ್ಸವದ ಸಂದರ್ಭದಲ್ಲಿ ಆಯೋಜಿಸಿರುವ ಈ ರೀತಿಯ ಸಮಾಜಮುಖಿ ಕಾರ್ಯಕ್ರಮಗಳು ಯುವಕರಿಗೆ ಮಾದರಿಯಾಗಿದ್ದು, ಸಮಾಜದಲ್ಲಿ ಸೌಹಾರ್ದತೆ ಮತ್ತು ಪರಸ್ಪರ ಸಹಕಾರದ ವಾತಾವರಣವನ್ನು ನಿರ್ಮಿಸುತ್ತದೆ ಎಂದರು.
ಟಿಪಟೂರಿನ ಯುವ ಪ್ರತಿಭೆ, ಕನ್ನಡದಲ್ಲಿ ನುಡಿಗಾರಿಕೆಯುಳ್ಳ ಹಾಗೂ ಕೆಂಪೇಗೌಡ ಪ್ರಶಸ್ತಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃರ ಸೈಯೀದಾ ಅಫೀಫಾ ಫಾತಿಮಾ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಅವರಂತಹ ಯುವ ಪ್ರತಿಭೆಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗುತ್ತಾರೆ ಎಂದರು.
HYC ತಂಡದ ಈ ಸೇವಾ ಚಟುವಟಿಕೆಗಳು ಸಮಾಜದ ಆರೋಗ್ಯ ಮತ್ತು ಸೌಖ್ಯಕ್ಕಾಗಿ ಯುವಕರ ಒಗ್ಗಟ್ಟಿನ ಶಕ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಭಾಗವಹಿಸಿದ ಗಣ್ಯರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಹಾಸನ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಶಜೀಲ್ ಅಹ್ಮದ್, ತಾಲ್ಲೂಕು ಸಮಿತಿ ಸದಸ್ಯ ತನ್ವೀರ್ ಅಹ್ಮದ್, ಬ್ರಾಂಚ್ ಅಧ್ಯಕ್ಷ ಶಫಿಉಲ್ಲಾ ಖಾನ್ (ಅಡ್ಡು), ಸೈಯದ್ ಇರ್ಫಾನ್ ಸೇರಿದಂತೆ ಹಲವು ಪಕ್ಷದ ಕಾರ್ಯಕರ್ತರು ಹಾಗೂ ಯುವಕರು ಹಾಜರಿದ್ದರು.




