ಬೆಂಗಳೂರು: ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಯುವತಿಯೊಬ್ಬಳನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕೋಣನಕುಂಟೆ ನಿವಾಸಿ ಶಹಾ ಜಹಾನ್ (36) ಬಂಧಿತ ಆರೋಪಿಯಾಗಿದ್ದು, ಆಕೆಗೆ ಎಚ್ಚರಿಕೆ ನೀಡಿ ಜಾಮೀನಿನಡಿ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈರಲ್ ವಿಡಿಯೋ, ಫೋಟೋ, ಸುದ್ದಿಗಳನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದ ಶಹಾ ಜಹಾನ್ ಅದೇ ರೀತಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದ ಹಳೆಯ ಘಟನೆಯೊಂದರ ವಿಡಿಯೋವನ್ನು ‘ಬೆಂಗಳೂರಿನಲ್ಲಿ ರೌಡಿಗಳ ಪುಂಡಹಾಸ’ ಎಂಬ ಶೀರ್ಷಿಕೆಯಡಿ ಸೆಪ್ಟಂಬರ್ 6ರಂದು ಹಂಚಿಕೊಂಡಿದ್ದರು.
ವಿಡಿಯೋವನ್ನು ಲಕ್ಷಾಂತರ ಜನ ವೀಕ್ಷಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಹಾ ಜಹಾನ್‌ಳನ್ನು ಪತ್ತೆಹಚ್ಚಿದ್ದ ಪೊಲೀಸರು ವಿವರಣೆ ಕೇಳಿದಾಗ ಆಕೆ ಪರಿಶೀಲಿಸದೇ ಹಳೆಯ ಘಟನೆಯ ವಿಡಿಯೋವನ್ನು ಬೆಂಗಳೂರಿನಲ್ಲಿ ನಡೆದಿದೆ ಎಂದು ಹಂಚಿಕೊಂಡಿರುವುದು ತಿಳಿದು ಬಂದಿದೆ.
ಪ್ರಕರಣ ದಾಖಲಿಸಿಕೊಂಡು ಶಹಾ ಜಹಾನ್‌ಳನ್ನು ಬಂಧಿಸಿದ್ದ ಪೊಲೀಸರು ಎಚ್ಚರಿಕೆ ನೀಡಿ, ಜಾಮೀನಿನನ್ವಯ ಬಿಡುಗಡೆಗೊಳಿಸಿರುವುದಾಗಿ ತಿಳಿಸಿದ್ದಾರೆ.
ಘಟನೆ ಕುರಿತು ಶಹಾ ಜಹಾನ್ ಸಹ ಸ್ಪಷ್ಟನೆ ನೀಡಿದ್ದು, ಮತ್ತೊಬ್ಬರು ಹಂಚಿಕೊಂಡಿದ್ದ ವಿಡಿಯೋವನ್ನು ನಾನು ಜನಜಾಗೃತಿಯ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಮರುಹಂಚಿಕೊಂಡಿದ್ದೆ. ಆದರೆ ಯಾವುದೇ ವಿಡಿಯೋ ಹಂಚಿಕೊಳ್ಳುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸದಿದ್ದರೆ ಬೇರೆಯದ್ದೇ ಸಂದೇಶ ರವಾನೆಯಾಗುತ್ತದೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.




