ಬೆಂಗಳೂರು: ಯುವಕನೊಬ್ಬ ತನ್ನ ಸ್ನೇಹಿತೆಯನ್ನು ಭೇಟಿಯಾಗಲು ಬಂದು ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ರಮಾಬಾಯಿ ವಿಧ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿರುವ ತನ್ನ ಗೆಳತಿಯನ್ನು ಭೇಟಿಯಾಗಲು ಮಾಲೂರು ಮೂಲದ ಯುವಕ ಬಂದಿದ್ದಾನೆ. ಈ ವೇಳೆ ತನ್ನನ್ನು ಯಾರಾದರೂ ತಡೆಯಬಹುದು ಎಂದು ಭಾವಿಸಿದ ಆತ ಬುರ್ಖಾ ಧರಿಸಿ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಬಂದಿದ್ದಾನೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ರಾತ್ರಿ 7 ಗಂಟೆ ರ ವೇಳೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದನ್ನು ಕಂಡ ವಿದ್ಯಾರ್ಥಿನಿಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಜ್ಞಾನಭಾರತಿ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಸಂಗತಿ ಬಯಲಾಗಿದೆ.
ಮಾಲೂರಿನಿಂದ ತನ್ನ ಸ್ನೇಹಿತೆಯನ್ನು ನೋಡಲು ಬಂದ ಆತನಿಗೆ ಉಳಿದುಕೊಳ್ಳಲು ಸ್ಥಳವಿಲ್ಲದ ಕಾರಣ ಆತನ ಸ್ನೇಹಿತೆಯೇ ಹಾಸ್ಟೆಲ್ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ. ಇದಕ್ಕಾಗಿ ಸ್ನೇಹಿತೆಯಿಂದಲೇ ಬಟ್ಟೆ ತೆಗೆದುಕೊಂಡು ಅದನ್ನು ಧರಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾನೆ.
ಘಟನೆ ನಂತರ ಮುಂಜಾಗ್ರತ ಕ್ರಮವಾಗಿ ಹುಡುಗಿಯರ ಹಾಸ್ಟೆಲ್ಗೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




