ಯುಗಾದಿ ಹಬ್ಬದ ಪ್ರಯುಕ್ತ 8 ಸಾವಿರ ಮಹಿಳೆಯರಿಗೆ ಸೀರೆ ವಿತರಣೆ

4 years ago

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ ಸಾಂಸ್ಕೃತಿಕ ಹಿನ್ನಲೆ ಇರುವ ಪ್ರದೇಶವಾಗಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ 7 ವಾರ್ಡ್ ಗಳಲ್ಲಿ ರಸ್ತೆ ಡಾಂಬರೀಕರಣ ಮತ್ತು ಒಳಚರಂಡಿ ದುರಸ್ತಿಗಾಗಿ ನವನಗರೋತ್ಥನ ಅನುದಾನದಲ್ಲಿ 70 ಕೋಟಿ ರೂಪಾಯಿ  ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ರಾಜಾಜಿನಗರ ವಿಧಾನಸಭಾ ಕ್ಷೇತ್ರ – ದಯಾನಂದ ನಗರ ವಾರ್ಡ್ ನ ಪಾಲಿಕೆ ಮಾಜಿ ಸದಸ್ಯ ಎಂ.ಮುನಿರಾಜು ಅವರ ನಿವಾಸದಲ್ಲಿ ನಗರ ದೇವತೆ ಅಣ್ಣಮ್ಮದೇವಿ ಮಹೋತ್ಸವ ಮತ್ತು ಯುಗಾದಿ ಹಬ್ಬದ ಪ್ರಯುಕ್ತ 8 ಸಾವಿರ ಮಹಿಳೆಯರಿಗೆ ಸೀರೆ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಜನರಿಗೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಪ್ರಥಮ ಆದ್ಯತೆ ನೀಡಲಾಗಿದೆ. ಕೊರೋನ ಸಾಂಕ್ರಮಿಕ ರೋಗ ಹತೋಟಿಯಲ್ಲಿದೆ. ಕೋವಿಡ್-19 ಲಸಿಕೆ ಹಾಕುವ ಕಾರ್ಯಕ್ರಮ ನಮ್ಮ ಕ್ಷೇತ್ರದಲ್ಲಿ ಸಂಪೂರ್ಣ ಯಶ್ವಸಿಯಾಗಿದೆ ಎಂದರು.

ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿದಾಗ ಮಾತ್ರ ಸಮಾಜದ ಅಭಿವೃದ್ದಿ. ಆದ್ದರಿಂದ ಪ್ರತಿಯೊಂದು ಯೋಜನೆಗಳನ್ನು ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದರು.

ಮಾಜಿ ಬಿ.ಬಿ.ಎಂ.ಪಿ. ಸದಸ್ಯರಾದ ಎಂ.ಮುನಿರಾಜು ಮಾತನಾಡಿ, ಎಸ್.ಸುರೇಶ್ ಕುಮಾರ್ ಅವರ ನೇತೃತ್ವದಲ್ಲಿ ಆರೋಗ್ಯ, ಪರಿಸರ, ಸ್ವಚ್ಛತೆ ಮೂಲಭೂತ ಸೌಲಭ್ಯ ಒದಗಿಸಿ ಅಭಿವೃದ್ದಿ ಪಥದತ್ತ ಹೆಜ್ಜೆ ಇಡಲಾಗಿದೆ ಎಂದರು.

ಹೆಣ್ಣುಮಕ್ಕಳಿಗೆ ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ತವರಿನಿಂದ ಬಾಗಿನ ಬರುವುದು ಸಂಪ್ರದಾಯ. ಆದ್ದರಿಂದ ದಯಾನಂದ ನಗರ ವಾರ್ಡ್ ನಲ್ಲಿರುವ 8 ಸಾವಿರ ಮಹಿಳೆಯರಿಗೆ ಸೀರೆ ವಿತರಿಸಲಾಗುತ್ತಿದೆ ಎಂದರು.

ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಪತ್ರಕರ್ತೆ ಸಾವಿತ್ರಿ ಸುರೇಶ್ ಕುಮಾರ್, ಮಾಜಿ ಬಿ.ಬಿ.ಎಂ.ಪಿ.ಸದಸ್ಯರಾದ ಎಂ.ಮುನಿರಾಜು ಮತ್ತು ಶಕೀಲ ಮುನಿರಾಜು ಹಾಗೂ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ. ಯುವ ಮೋರ್ಚಾ ಅಧ್ಯಕ್ಷ ಸಂಜಯ್ ಕುಮಾರ್, ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸಿ, ಮಹಿಳೆಯರಿಗೆ ಸೀರೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ. ಮುಖಂಡರು ಪಾಲ್ಗೊಂಡಿದ್ದರು.

Leave a Reply