ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ

2 years ago

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಕೇರಿ ಸಂಗೀತ ವಿದ್ಯಾಲಯದ ಸಹಕಾರದಲ್ಲಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಿಸೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಕಲಕೇರಿ ಸಂಗೀತ ವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಮನಸೂರಿನ ಡಾ.ಬಸವರಾಜ ದೇವರು ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಕೇರಿ ಸಂಗೀತ ವಿದ್ಯಾಲಯದ ಸಂಸ್ಥಾಪಕಿ ಅಗಾತ್ ಪೋರ್ಟಿಯರ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಕಲಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭೀಮವ್ವ ಮರೇವಾಡ, ಉಪಾಧ್ಯಕ್ಷ  ಮಂಜುನಾಥ ಇದ್ಲಿ, ಕಲಕೇರಿ ಸಂಗೀತ ವಿದ್ಯಾಲಯದ ಕಾರ್ಯದರ್ಶಿ ಆ್ಯಡಮ್ ವುಡ್ವರ್ಡ್ ಹಾಗೂ ಹಿರಿಯ ಕಲಾವಿದ ವೀರಣ್ಣ ಪತ್ತಾರ ಅವರು ಅತಿಥಿಗಳಾಗಿ ಆಗಮಿಸುವರು.

Leave a Reply